ಅ.25ರಿಂದ 1-5ನೇ ತರಗತಿ ಆರಂಭಕ್ಕೆ ಗ್ರೀನ್ ಸಿಗ್ನಲ್ – ಮಾರ್ಗಸೂಚಿ ಪ್ರಕಟ…

56
firstsuddi

ಬೆಂಗಳೂರು : ಅಕ್ಟೋಬರ್ 25 ರಿಂದ 1 ರಿಂದ 5ನೇ ತರಗತಿ ತೆರೆಯಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಈ ಬಗ್ಗೆ ಇಂದು ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಈ ಕುರಿತು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಮಾಹಿತಿ ನೀಡಿದ್ದು, ದಸರಾ ಬಳಿಕ ಶಾಲೆ ಆರಂಭಿಸುವುದಾಗಿ ನಾವು ಹೇಳಿದ್ದೆವು. ಅದರಂತೆ ಶಾಲೆ ಆರಂಭ ಆಗಲಿದೆ. ಸದ್ಯಕ್ಕೆ ಎಲ್‍ಕೆಜಿ, ಯುಕೆಜಿ ಬಗ್ಗೆ ಇಲಾಖೆ ನಿರ್ಧಾರ ಮಾಡಿಲ್ಲ. ಅಕ್ಟೋಬರ್ 21 ಅಥವಾ 25ರಂದು ಶಾಲೆ ಆರಂಭಿಸಲು ನಿರ್ಧಾರ ಮಾಡಲಾಗಿದೆ. ಫೀಸ್ ಬಗ್ಗೆ ಕೋರ್ಟ್ ನ ಆದೇಶದ ಬಳಿಕ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ಮಾರ್ಗಸೂಚಿ ಏನು?
• ಕೊರೊನಾ ಮಾರ್ಗಸೂಚಿ ಕಡ್ಡಾಯವಾಗಿ ಪಾಲನೆ ಮಾಡಬೇಕು
• ಶೇ.50 ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ
• ಮಕ್ಕಳಿಗೆ ಹಾಜರಾತಿ ಕಡ್ಡಾಯ ಇರುವುದಿಲ್ಲ. ಶಾಲೆಗೆ ಹಾಜರಾಗಲು ಮಕ್ಕಳಿಗೆ ಒತ್ತಾಯ ಇರುವುದಿಲ್ಲ
• ತರಗತಿಯಲ್ಲಿ 1 ಮೀಟರ್ ಅಂತರದಲ್ಲಿ ಕೂರಬೇಕು
• ಸ್ಯಾನಿಟೈಸರ್, ಮಾಸ್ಕ್ ಕಡ್ಡಾಯವಾಗಿ ಬಳಕೆ ಮಾಡಬೇಕು
• ಶಾಲೆಯ ಒಳಗೆ, ಆವರಣದಲ್ಲಿ, ತರಗತಿಗಳ ಒಳಗೆ ಗುಂಪುಗೂಡುವಂತಿಲ್ಲ
• ಪೋಷಕರ ಅನುಮತಿ ಪಡೆದು ಮಕ್ಕಳು ತರಗತಿಗೆ ಬರಬಹುದು
• ಎರಡು ಡೋಸ್ ಪೂರ್ಣ ಮಾಡಿರುವ ಶಿಕ್ಷಕರು, ಸ್ಟಾಫ್ ಗೆ ಮಾತ್ರ 1-5 ತರಗತಿಗಳೊಳಗೆ ಪ್ರವೇಶ
• ಶಿಕ್ಷಕರು, ಸ್ಟಾಫ್ ಎರಡು ಡೋಸ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದಿರಬೇಕು

ಕೊವಿಡ್ ಹೊಸ ಮಾರ್ಗಸೂಚಿ ಬಿಡುಗಡೆ :
ಕೊವಿಡ್ ಹೊಸ ಮಾರ್ಗಸೂಚಿಯನ್ನು ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದೆ. ಅದರಂತೆ ಶೇ.50 ರಷ್ಟು ಸಾಮರ್ಥ್ಯದಲ್ಲಿ ಸ್ವಿಮ್ಮಿಂಗ್ ಪೂಲ್ ಬಳಕೆಗೆ ಅನುಮತಿ ನೀಡಲಾಗಿದೆ. ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ರಿಲ್ಯಾಕ್ಸೇಷನ್ ನೀಡಲಾಗಿದೆ. ಆದರೆ, ಯು.ಕೆ ಪ್ರಯಾಣಿಕರಿಗೆ ಕ್ವಾರಂಟೈನ್ ನಿಯಮ ಮುಂದುವರಿಕೆ ಮಾಡಲಾಗಿದೆ.