ಮಂಡ್ಯ : ಕುಡಿಯುವ ನೀರಿನಲ್ಲಿ ಚರಂಡಿ ನೀರು ಮಿಶ್ರಣವಾಗುತ್ತಿದ್ದು, ಇಲ್ಲಿನ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಹಾಹಾಕಾರ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಹೊನ್ನಾವರ ಗ್ರಾಮದಲ್ಲಿ ಕಳೆದೊಂದು ವಾರದಿಂದ ನೀರಿನಲ್ಲಿ ಚರಂಡಿ ನೀರು ಮಿಶ್ರಣವಾಗಿ ಬರುತ್ತಿದೆ. ಅಲ್ಲದೇ ನಲ್ಲಿಯನ್ನು ಆನ್ ಮಾಡಿದ್ರೆ ಸಾಕು ಗಬ್ಬು ವಾಸನೆ ಬರುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯತಿಯ ಸದಸ್ಯರಿಗೆ ಹಾಗೂ ಅಧಿಕಾರಿಗಳಿಗೆ ಎಷ್ಟು ಹೇಳಿದರೂ ಸಹ ಅವರು ತಲೆ ಕೆಡಿಸಿಕೊಳ್ಳುತ್ತಿಲ್ಲ.
ಸದ್ಯ ಈ ಊರಿನ ಜನ ಕುಡಿಯುವ ನೀರಿಗಾಗಿ ಪಕ್ಕದ ಊರಿಗೆ ಹೋಗಿ ನೀರು ತರುವಂತಹ ಪರಿಸ್ಥಿತಿ ಎದುರಾಗಿದೆ. ಕೂಡಲೇ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.










