ಬಿಡುಗಡೆಯಾದ ನಾಲ್ಕೇ ದಿನಕ್ಕೆ ‘ಕೋಟಿಗೊಬ್ಬ 3’ ಕಲೆಕ್ಷನ್ ಮಾಡಿದ್ದು ಎಷ್ಟು ಗೊತ್ತಾ?

69
firstsuddi

ಬೆಂಗಳೂರು : ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಬಿಡುಗಡೆಯಾದ ನಾಲ್ಕೇ ದಿನಕ್ಕೆ ಭರ್ಜರಿ ಕಲೆಕ್ಷನ್ ಮಾಡಿದೆ.

ಈ ಕುರಿತು ಸ್ವತಃ ನಟ ಕಿಚ್ಚ ಸುದೀಪ್ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆ ಪ್ರಕಾರ ಚಿತ್ರವು ಕೇವಲ ನಾಲ್ಕು ದಿನದಲ್ಲಿ 40.5 ಕೋಟಿ ರೂ. ಹಣವನ್ನು ಬಾಚಿಕೊಂಡಿದೆ.

ಅ.14 ರಂದು ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ ಕೊನೆ ಕ್ಷಣದಲ್ಲಿ ಚಿತ್ರ ಬಿಡುಗಡೆ ರದ್ದಾಗಿತ್ತು. ಒಂದು ದಿನ ತಡವಾಗಿ ಚಿತ್ರ ಬಿಡುಗಡೆಯಾದರೂ ಚಿತ್ರ ಒಳ್ಳೆಯ ಗಳಿಕೆಯನ್ನೇ ಮಾಡಿದೆ. ಚಿತ್ರದ ಯಶಸ್ಸು ಕಿಚ್ಚನ ಅಭಿಮಾನಿಗಳಿಗೆ ಅತೀವ ಸಂತಸ ಉಂಟುಮಾಡಿದ್ದು, ಎರಡು ವರ್ಷದ ನಂತರ ನೆಚ್ಚಿನ ನಟನನ್ನು ತೆರೆಯ ಮೇಲೆ ನೋಡುತ್ತಾ ಸಂಭ್ರಮಿಸುತ್ತಿದ್ದಾರೆ.