ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ – ಬೆಂಕಿಯಿಂದ ತಪ್ಪಿಸಿಕೊಳ್ಳಲು 19ನೇ ಮಹಡಿಯಿಂದ ಜಿಗಿದು ವ್ಯಕ್ತಿ ಸಾವು…

60
firstsuddi

ಮುಂಬೈ(ಮಹಾರಾಷ್ಟ್ರ): ಬಹುಮಹಡಿ ವಸತಿ ಕಟ್ಟಡವೊಂದರಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದ್ದು, ಈ ವೇಳೆ ಬೆಂಕಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ವ್ಯಕ್ತಿಯೊಬ್ಬರು ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.

ಮುಂಬೈನ ಕರೇ ರಸ್ತೆಯಲ್ಲಿರುವ ಲೋವರ್ ಪರೇಲ್ ಏರಿಯಾದ ಅವಿಜ್ಞಾ ಪಾರ್ಕ್ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ನಡೆದಿದ್ದು, 60ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಬೆಂಕಿ ಆವರಿಸಿದ್ದ ಫ್ಲ್ಯಾಟ್ ನಿಂದ ಹೊರ ಬರಲು ಯತ್ನಿಸಿರುವ ವ್ಯಕ್ತಿಯೊಬ್ಬ ಆಯತಪ್ಪಿ ಸುಮಾರು 19 ಅಂತಸ್ತಿನಿಂದ ಕೆಳಗೆ ಬಿದ್ದಿರುವುದು ಕಂಡುಬಂದಿದೆ.

ಮೃತ ವ್ಯಕ್ತಿಯನ್ನು ಅರುಣ್ ತಿವಾರಿ(30) ಎಂದು ಗುರುತಿಸಲಾಗಿದೆ. ಈಗಾಗಲೇ 26 ಜನರನ್ನು ರಕ್ಷಿಸಲಾಗಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.