ಇಂದಿನಿಂದ ಪ್ರಾಥಮಿಕ ಶಾಲೆಗಳು ಆರಂಭ…

64
firstsuddi

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ 1ರಿಂದ 5ನೇ ತರಗತಿ ಶಾಲೆಗಳು ಆರಂಭವಾಗಲಿದ್ದು, ಈ ಮೂಲಕ ಬರೋಬ್ಬರಿ ಒಂದೂವರೆ ವರ್ಷಗಳ ಬಳಿಕ ಓಪನ್ ಆಗಲಿದೆ.

ನ.2ರವರೆಗೆ ಅರ್ಧ ದಿನ ಮಾತ್ರ ತರಗತಿ ನಡೆಯಲಿದ್ದು, ನವೆಂಬರ್ 2ರಿಂದ ಪೂರ್ಣ ಪ್ರಮಾಣದಲ್ಲಿ ತರಗತಿ ಆರಂಭವಾಗಲಿದೆ. ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯ ಇಲ್ಲ ಎಂದು ಇಲಾಖೆ ತಿಳಿಸಿದೆ.

ಪಾಸಿಟಿವಿಟಿ ದರ ಶೇ.1 ಕ್ಕಿಂತ ಕಡಿಮೆ ಇರುವಲ್ಲಿ ಮಾತ್ರ ಸ್ಕೂಲ್ ಓಪನ್ ಮಾಡಲಾಗುತ್ತಿದೆ. ಸೋಮವಾರದಿಂದ ಶುಕ್ರವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30ರವರೆಗೆ ಕ್ಲಾಸ್ ನಡೆಯಲಿದ್ದು, ಇನ್ನುಳಿದ ಎರಡು ದಿನ ಶಾಲೆ ಕೊಠಡಿಗಳ ಕ್ಲೀನಿಂಗ್ ಕಾರ್ಯ ನಡೆಯಲಿದೆ. ಒಂದು ತರಗತಿಯಲ್ಲಿ 20 ಮಕ್ಕಳಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಆನ್ ಲೈನ್ ಅಥವಾ ಆಫ್ ಲೈನ್ ಎರಡೂ ತರಗತಿಗೂ ಅವಕಾಶ. 50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಫೇಸ್ಶೀಲ್ಡ್ ಕಡ್ಡಾಯ ಹಾಗೂ ಶಿಕ್ಷಕರು, ಸಿಬ್ಬಂದಿ 2 ಡೋಸ್ ಲಸಿಕೆ ಕಡ್ಡಾಯವಾಗಿದೆ. ಮಕ್ಕಳಲ್ಲಿ ಒಂದು ಮೀಟರ್ ಅಂತರ ಪಾಲನೆ ಕಡ್ಡಾಯ. ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. ಸ್ಯಾನಿಟೈಸೇಷನ್ ಕಡ್ಡಾಯವಾಗಿದೆ.