ವಿಜಯಪುರ : ಜಮೀರ್ ಬ್ಲ್ಯಾಕ್ ಮೇಲ್ ವ್ಯಕ್ತಿ, ಕೊಚ್ಚೆ ಇದ್ದಂಗೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಶಾಸಕ ಜಮೀರ್ ಅಹ್ಮದ್ ವಿರುದ್ಧ ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ 20-20 ಸರ್ಕಾರದ ಆಡಿಯೋ ವಿಚಾರದ ಕುರಿತು ಮಾತನಾಡಿ, ತಾಕತ್ ಇದ್ದರೆ ಆಡಿಯೋ ಬಿಡುಗಡೆ ಮಾಡಲಿ. ಬ್ಲ್ಯಾಕ್ ಮೇಲ್ ಜೀವನ ಮಾಡ್ತಾರೆ. ಮಾರ್ಯಾದೆ ಇಲ್ಲದವರ ಜೊತೆಗೆ ಚರ್ಚೆ ಮಾಡಲ್ಲ ಎಂದರು.
ಕುಮಾರಸ್ವಾಮಿಗೆ ಬೆಂಗಳೂರಿನಲ್ಲಿ ಇರಲು ಜಾಗ ಇರಲಿಲ್ಲ ಎಂಬ ಜಮೀರ್ ಹೇಳಿಕೆಗೆ ಉತ್ತರಿಸಿದ ಹೆಚ್ಡಿಕೆ, ಬೆಂಗಳೂರು ಬಹಳ ದೊಡ್ಡದು. ಬೆಂಗಳೂರಿನಲ್ಲಿ ನನಗೆ ಜಾಗವೇ ಇಲ್ವಾ. ಪಾಪ ಜಮೀರ್ ನನಗೆ ಜಾಗ ಕೊಡಬೇಕಾ? ಕೊಚ್ಚೆ ಮೇಲೆ ಕಲ್ಲು ಎಸೆದರೆ ನಮ್ಮ ಮೇಲೆ ಬೀಳುತ್ತದೆ ಎಂದು ವಾಗ್ದಾಳಿ ನಡೆಸಿದರು.










