ನಟ ಪುನೀತ್ ರಾಜ್ ಕುಮಾರ್ ನಿಧನದ ಹಿನ್ನಲೆ ; ಖಾಸಗಿ ಶಾಲೆಗಳಿಗೆ ರಜೆ…

94
firstsuddi

ಬೆಂಗಳೂರು : ನಟ ಪುನೀತ್ ರಾಜ್ ಕುಮಾರ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಅವರ ನಿಧನದ ಹಿನ್ನಲೆ ಕೆಲ ಖಾಸಗಿ ಶಾಲೆಗಳು ನಾಳೆ ರಜೆ ಘೋಷಣೆ ಮಾಡಿವೆ.

ಈ ಬಗ್ಗೆ ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಕರ್ನಾಟಕ ಪ್ರಕಟಣೆ ಹೊರಡಿಸಿದೆ. ಆದರೆ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸುವ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.