ಪೋಪ್ ಫ್ರಾನ್ಸಿಸ್ ಭೇಟಿಯಾದ ಪ್ರಧಾನಿ ಮೋದಿ.

70
firstsuddi

ವ್ಯಾಟಿಕನ್ ಸಿಟಿ(ಇಟಲಿ) : ರೋಮ್ ನಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ವ್ಯಾಟಿಕನ್ ನಗರಕ್ಕೆ ಆಗಮಿಸಿದ್ದು, ಕ್ರೈಸ್ತ ಧರ್ಮ ಗುರು ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಪೋಪ್ ಫ್ರಾನ್ಸಿಸ್ ಅವರೊಂದಿಗೆ ಅತ್ಯಂತ ಆತ್ಮೀಯ ಭೇಟಿಯನ್ನು ನಡೆಸಿದೆ, ಅವರೊಂದಿಗೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲು ನನಗೆ ಅವಕಾಶ ಸಿಕ್ಕಿತು. ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.