ಹೈದರಾಬಾದ್ : ಸ್ಯಾಂಡಲ್‍ವುಡ್ ನ ನಟ ಪುನೀತ್ ರಾಜ್‍ಕುಮಾರ್ ಅವರು ಓದಿಸುತ್ತಿದ್ದ 1,800 ಮಕ್ಕಳ ಜವಾಬ್ದಾರಿಯನ್ನು ಇದೀಗ ಪುನೀತ್ ಅವರ ಆತ್ಮೀಯ ಗೆಳೆಯ ಕಾಲಿವುಡ್ ನಟ ವಿಶಾಲ್ ಅವರು ಅಷ್ಟು ಮಕ್ಕಳ ಜವಾಬ್ದಾರಿಯನ್ನು ಹೊರುವುದಾಗಿ ಹೇಳಿದ್ದಾರೆ.
ಹೌದು, ಹೈದರಾಬಾದ್ನಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ನನ್ನ ಸ್ನೇಹಿತ ಪುನೀತ್ ರಾಜ್ಕುಮಾರ್ ಅವರನ್ನ ಈ ವೇದಿಕೆಯಲ್ಲಿ ಈ ರೀತಿ ನೆನೆಯುತ್ತೇನೆ ಎಂದುಕೊಂಡಿರಲಿಲ್ಲ. ಪುನೀತ್ ಇಲ್ಲ ಅನ್ನೋದನ್ನು ನಂಬಲು ಆಗುತ್ತಿಲ್ಲ. ಪುನೀತ್ ಅಂತಹ ಬಹುಮುಖ ನಟನನ್ನು ನಾವು ಕಳೆದುಕೊಂಡಿದ್ದೇವೆ. ನಿನ್ನ ಗೆಳೆಯನಾಗಿ ಮಾತು ಕೊಡುತ್ತಿದ್ದೇನೆ. ಆ 1,800 ಮಕ್ಕಳಿಗೆ ನಾನು ವಿದ್ಯಾಭ್ಯಾಸ ಕೊಡಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.










