ಬೆಂಗಳೂರು : ನಟ ಪುನೀತ್ ರಾಜ್‍ಕುಮಾರ್ ಅವರು ಮಣ್ಣಲ್ಲಿ ಮಣ್ಣಾಗಿ ಒಂದು ದಿನ ಕಳೆದಿದ್ದು, ಇಂದು ಮತ್ತು ನಾಳೆ ಅಪ್ಪು ಸಮಾಧಿ ವೀಕ್ಷಣೆಗೆ ಸಾರ್ವಜನಿಕರಿಗೆ ನಿರ್ಬಂಧಿಸಲಾಗಿದೆ.
ನಾಳೆ ಅಪ್ಪು ಸಮಾಧಿಗೆ ಕುಟುಂಬಸ್ಥರು ಹಾಲುತುಪ್ಪ ಕಾರ್ಯನೆರವೇರಿಸಲಿದ್ದು, ಐದನೇ ದಿನ ಹಾಲು-ತುಪ್ಪ ಕಾರ್ಯ ಮುಗಿಯುವವರೆಗೂ ಸಾರ್ವಜನಿಕರಿಗೆ ಕಂಠೀರವ ಸ್ಟುಡಿಯೋಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಕಂಠೀರವ ಸ್ಟೂಡಿಯೋ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ನಾಳೆ ಅಪ್ಪು ಸಮಾಧಿ ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಕಂಠೀರವ ಸ್ಟುಡಿಯೋ ಕಡೆ ಆಗಮಿಸುವ ಹಿನ್ನಲೆ ಬ್ಯಾರಿಗೇಡ್ ಹಾಕಿ ಆರ್‌ಎಎಫ್ ಕಮಾಂಡೋ ಪಡೆ, ಕೆ.ಎಸ್.ಆರ್.ಪಿ ತುಕಡಿಯನ್ನು ನಿಯೋಜಿಸಲಾಗಿದೆ. ಇನ್ನು ಒಂದು ವಾರದವರೆಗೆ ಪೊಲೀಸ್ ಬಿಗಿ ಭದ್ರತೆ ಮುಂದುವರೆಸುವ ಸಾಧ್ಯತೆ ಇದೆ ಎನ್ನಲಾಗಿದೆ.










