ಪುನೀತ್‍ಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಿ – ಸಿದ್ದರಾಮಯ್ಯ ಮನವಿ…

65
firstsuddi

ಬೆಂಗಳೂರು : ಸ್ಯಾಂಡಲ್ ವುಡ್ ನ ನಟ ಪುನೀತ್ ರಾಜ್‍ಕಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಯಾವ ಪ್ರಶಸ್ತಿ ಗೌರವಗಳಿಗಿಂತಲೂ ಪುನೀತ್ ರಾಜ್‍ಕಮಾರ್ ಜನತೆಯಿಂದ ಗಳಿಸಿರುವ ಪ್ರೀತಿ-ಅಭಿಮಾನ ದೊಡ್ಡದು. ಹೀಗಿದ್ದರೂ, ಪುನೀತ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪಡೆಯುತ್ತಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ಅವರಿಗೆ ಮರಣೋತ್ತರವಾಗಿ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ನಟ ಪುನೀತ್ ರಾಜ್‍ಕಮಾರ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.