ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂ ಕುಸಿತ…

82
firstsuddi

ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂ ಕುಸಿತ ಉಂಟಾಗಿದೆ.

ಚಾಮುಂಡಿ ಬೆಟ್ಟದಿಂದ ನಂದಿಗೆ ಹೋಗುವ ಮಾರ್ಗದಲ್ಲಿ ಭೂ ಕುಸಿತ ಸಂಭವಿಸಿದೆ. ಸುಮಾರು 70 ಅಡಿಯಷ್ಟು ಭೂಮಿ ಕುಸಿದಿದೆ. ಕೆಲವು ದಿನಗಳ ಹಿಂದೆಯಷ್ಟೇ ಭಾರಿ ಮಳೆಗೆ ನಂದಿ ಮಾರ್ಗದಲ್ಲಿ ಭೂಕುಸಿತವಾಗಿತ್ತು. ಇದೀಗ ಮತ್ತೆ ಅದೇ ಜಾಗದಲ್ಲಿ ಭೂಮಿ ಕುಸಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನಂದಿಗೆ ಹೋಗುವ ಮಾರ್ಗವನ್ನು ಜಿಲ್ಲಾಡಳಿತ ಬಂದ್ ಮಾಡಿದೆ.