ಬೆಂಗಳೂರು : ದಿವಂಗತ ಪುನೀತ್ ರಾಜ್‍ಕುಮಾರ್ ಸಮಾಧಿಗೆ ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಭೇಟಿ ನೀಡಿದರು.
ನಿನ್ನೆ ಕಂಠೀರವ ಸುಡಿಯೋದಲ್ಲಿದಲ್ಲಿರುವ ಪುನೀತ್ ರಾಜ್‍ಕುಮಾರ್ ಸಮಾಧಿಗೆ ಭೇಟಿ ನೀಡಿ ಸಮಾಧಿಗೆ ನಮಿಸಿದರು. ಬಳಿಕ ಮಾತನಾಡಿದ ಅವರು, ಪುನೀತ್ ಅವರನ್ನು ಭೇಟಿಯಾಗುವ ಆ ಸೌಭಾಗ್ಯ ನನಗೆ ಸಿಕ್ಕಿಲ್ಲ. ಆದರೆ ದೂರವಾಣಿ ಕರೆ ಮಾಡಿ ಒಂದು ಬಾರಿ ಮಾತನಾಡಿದ್ದೆ. ಅವರು ಬಹಳ ಪ್ರೀತಿಯಿಂದ ಮಾತನಾಡಿಸಿದ್ದರು. ನನ್ನ ಸಿನಿಮಾ ನೋಡಿ ನನಗೆ ಕಾಲ್ ಮಾಡಿ ಮಾತಾಡಿದ್ದರು. ಪುನೀತ್ ಇಲ್ಲ ಅನ್ನುವುದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಪುನೀತ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.










