ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,929 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,43,44,683ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 392 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,60,265ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,43,44,683 ಮಂದಿ ಸೋಂಕಿತರ ಪೈಕಿ ಈವರೆಗೆ 3,37,37,468 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










