ನ.9ರಂದು ಪುನೀತ್ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ…

71
firstsuddi

ಬೆಂಗಳೂರು : ನವೆಂಬರ್ 9 ರಂದು ಪುನೀತ್ ಅಭಿಮಾನಿಗಳಿಗೆ ಅರಮನೆ ಮೈದಾನದಲ್ಲಿ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಪುನೀತ್ ಅಗಲಿಕೆ ಆಘಾತದಿಂದ ಅಭಿಮಾನಿಗಳು ಇನ್ನೂ ಹೊರಬಂದಿಲ್ಲ. ಇದರ ಬೆನ್ನಲ್ಲೇ ಪುನೀತ್ ಸ್ಮರಣಾರ್ಥ ಹಲವು ಕಾರ್ಯಕ್ರಮಗಳು ನಿರ್ಧಾರವಾಗಿವೆ. ನವೆಂಬರ್ 8ರಂದು ಪುನೀತ್ ಪುಣ್ಯತಿಥಿ ಆಚರಿಸಿದರೆ, 9 ರಂದು ಅರಮನೆ ಮೈದಾನದಲ್ಲಿ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇನ್ನು ನವೆಂಬರ್ 16ರಂದು ಚಲನಚಿತ್ರ ವಾಣಿಜ್ಯ ಮಂಡಳಿ ಪುನೀತ್ ನಮನ ಹೆಸರಿನಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಂಡಿದೆ.