ಚಿಕ್ಕಬಳ್ಳಾಪುರ : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಕೆರೆಗೆ ಉರುಳಿದ ಘಟನೆ ಬಾಗೇಪಲ್ಲಿ ತಾಲೂಕಿನ ಯಲ್ಲಂಪಲ್ಲಿ ಗ್ರಾಮದ ಬಳಿ ನಡೆದಿದ್ದು, ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಾಗೇಪಲ್ಲಿ ಡೀಪೋಗೆ ಸೇರಿದ ಈ ಬಸ್, ಬಾಗೇಪಲ್ಲಿಯಿಂದ ಚಿಂತಾಮಣಿ ನಗರಕ್ಕೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಬಸ್ ನ ಎಕ್ಸಲ್ ಕಟ್ ಆಗಿ ಕೆರೆಗೆ ಉರುಳಿ ಬಿದ್ದಿದೆ ಎನ್ನಲಾಗಿದೆ. ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.










