ಕಾನ್ಸ್ ಟೇಬಲ್ ಮಗನ ಬರ್ಬರ ಕೊಲೆ ಪ್ರಕರಣ ; ಆರು ಆರೋಪಿಗಳು ಅರೆಸ್ಟ್…

84
firstsuddi

ಕಲಬುರಗಿ : ಬೆಳ್ಳಂಬೆಳಗ್ಗೆ ಬಸ್ ನಿಲ್ದಾಣದಲ್ಲಿ ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆಕಾಶ ಜಾಧವ (22), ಮುರ್ತುಜಾ ಮೊಹಮ್ಮದ್ ಅಲಿ (25), ಅಶೋಕ ಮೂಲಭಾರತಿ (21) ಸಾಗರ ಭೈರಾಮಡಗಿ (22), ಶುಭಂ ದೊಡ್ಡಮನಿ (23), ಹಾಗೂ ಕೌಶಿಕ್ ಹಳೆಮನಿ (21) ಬಂಧಿತ ಆರೋಪಿಗಳು. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳು, ಎರಡು ಬೈಕ್ ಹಾಗೂ ಒಂದು ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನವೆಂಬರ್ .04 ರಂದು ಅಭಿಷೇಕ್ ನನ್ನು ಕೇಂದ್ರ ಬಸ್ ನಿಲ್ದಾಣದಲ್ಲಿ ದುಷ್ಕರ್ಮಿಗಳು ಸಾವಿರಾರು ಜನರ ಮುಂದೆ ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ ಕೊಲೆಗೈದಿದ್ದರು. ಅಭಿಷೇಕ್ ತಂದೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನ್ಸ್ ಟೇಬಲ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮಾರಕಾಸ್ತ್ರ ಹಿಡಿದು ಯುವಕನನ್ನು ಅಟ್ಟಾಡಿಸಿರುವ ದೃಶ್ಯ ಬಸ್ ನಿಲ್ದಾಣ ಬಳಿಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಸದ್ಯ ಬಂಧಿತ ಆರೋಪಿಗಳನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.