ಕತ್ತಲಲ್ಲಿ ಕರಿ ಬೆಕ್ಕು ಹುಡುಕಿದಂಗೆ : ಸಚಿವ ಈಶ್ವರಪ್ಪ.

91
firstsuddi

ಬೆಂಗಳೂರು : ವಿಧಾನ ಸೌಧದಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬದಲಾವಣೆ ಮಾಡ್ತಾರೆ ಎಂಬ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸಿ, ಇದು ‘ಕತ್ತಲಲ್ಲಿ ಕರಿ ಬೆಕ್ಕು ಹುಡುಕಿದ ಹಾಗೆ’. ಸುಮ್ಮನೇ ಆ ರೀತಿಯೆಲ್ಲ ಹೇಳಬಾರದು. ಯಾವುದೇ ಕಾರಣಕ್ಕೂ ನಳಿನ್ ಕುಮಾರ್ ಕಟೀಲ್ ಬದಲಾವಣೆ ಇಲ್ಲ. ಅವರು ರಾಜ್ಯಾದ್ಯಂತ ಉತ್ತಮ ಕೆಲಸ ಮಾಡುತ್ತಿದ್ದಾರೆ. ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಬಿಟ್ ಕಾಯಿನ್ ನಲ್ಲಿ ಪ್ರಭಾವಿಗಳಿದ್ದಾರೆ ಎಂಬ ವಿಪಕ್ಷಗಳ ಆರೋಪ ವಿಚಾರವಾಗಿ ಮಾತನಾಡಿದ ಅವರು, ಇದರಲ್ಲಿ ಕಾಂಗ್ರೆಸ್ ಅವರು ಇದ್ದಾರಾ? ಜೆಡಿಎಸ್ ಅವರು ಇದ್ದಾರಾ? ಯಾರಿದ್ದಾರೆ ಅನ್ನೋದು ತನಿಖೆಯಿಂದ ಗೊತ್ತಾಗಲಿದೆ. ಈ ಬಗ್ಗೆ ನಾನೇನು ಹೇಳಲು ಹೋಗಲ್ಲ. ಸಿಎಂ ಮಗನಿದ್ದಾರಾ? ಸಚಿವರ ಮಗನಿದ್ದಾರಾ? ಇದೆಲ್ಲ ಸಾರ್ವಜನಿಕ ಚರ್ಚೆಯಾದ್ರೆ ನಾನ್ಯಾಕೆ ಉತ್ತರಿಸಲಿ. ಎಂದು ಹೇಳಿದ್ದಾರೆ.

ಮೇಕೆದಾಟು ಸಂಬಂಧ ಕಾಂಗ್ರೆಸ್ ಹೋರಾಟ ಬಗ್ಗೆ ಮಾತನಾಡಿದ ಈಶ್ವರಪ್ಪ, ಮೇಕೆದಾಟು ಯೋಜನೆಯನ್ನು ಕಾನೂನು ಬದ್ಧವಾಗಿ ಮಾಡಲೇಬೇಕು ಎಂದು ತೀರ್ಮಾನಿಸಿದ್ದೇವೆ. ಕಾಂಗ್ರೆಸ್ ಸರ್ಕಾರ ಇದ್ದಾಗ ಯಾಕೆ ಮಾಡಲಿಲ್ಲ?. ನಾವೇನು ಮಾಡಲ್ಲ ಎಂದು ಹೇಳಲಿಲ್ಲವಲ್ಲ. ಅವರು ಪಾದಯಾತ್ರೆ ಮಾಡ್ಲಿ ಬಿಡ್ಲಿ. ನಾವಂತೂ ಮೇಕೆದಾಟು ಯೋಜನೆ ಮಾಡೇ ಮಾಡ್ತಿವಿ. ಇವರು ಸುಮ್ಮನೆ ರಾಜಕೀಯಕ್ಕಾಗಿ ಪಾದಯಾತ್ರೆ ಮಾಡ್ತಿದ್ದಾರೆ ಅಷ್ಟೇ ಎಂದರು.