ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ…

61
firstsuddi

ಬೆಂಗಳೂರು : ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳು ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಗೆ ಭರವಸೆ ನೀಡಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೇತೃತ್ವದಲ್ಲಿ ಗೋವಾ ಕನ್ನಡ ಮಹಾಸಂಘ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಗೋವಾ ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದ ಬಹುತೇಕ ಜನರು ನೆಲೆಸಿದ್ದಾರೆ. ಕನ್ನಡ ಸಂಸ್ಕೃತಿಯನ್ನು ಕಾಪಾಡುತ್ತಿದ್ದಾರೆ. ಆದರೆ ಕನ್ನಡಿಗರಿಗೆ ಅಲ್ಲಿ ನೆಲೆಯಿಲ್ಲ. ಹೀಗಾಗಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಸಿದ್ಧವಿದೆ. ಇದಕ್ಕೆ ಸೂಕ್ತ ಭೂಮಿಯನ್ನು ಗುರುತಿಸಿ ಡಿಪಿಆರ್ ಸಿದ್ಧಪಡಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗೋವಾ ಕನ್ನಡ ಮಹಾ ಸಂಘದ ಅಧ್ಯಕ್ಷ ಹನುಮಂತರೆಡ್ಡಿ ಶಿರೂರ್, ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಬದಾಮಿ, ಮಹೇಶ್ ಬಾಬು ಸುರ್ವೇ, ಅರುಣ್ ಕುಮಾರ್ ಈ ಸಂದರ್ಭದಲ್ಲಿ ಇದ್ದರು.