ಖ್ಯಾತ ವಕೀಲ ರಾಜೇಶ್ ಭಟ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ…

68
firstsuddi

ಮಂಗಳೂರು : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ನಾಪತ್ತೆಯಾಗಿರುವ ಖ್ಯಾತ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ಇನ್ನೂ ಪತ್ತೆಯಾಗಿಲ್ಲ. ಹೀಗಾಗಿ ವಕೀಲ ರಾಜೇಶ್ ಭಟ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.

ಪ್ರಕರಣ ಬೇಧಿಸಲು ಮಂಗಳೂರು ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಅವರು 6 ತಂಡಗಳನ್ನು ರಚಿಸಿದ್ದು, ಆರೋಪಿ ದೇಶ ಬಿಟ್ಟು ಎಲ್ಲೂ ಹೊರಗೆ ಹೋಗದಂತೆ ಎಚ್ಚರ ವಹಿಸಲಾಗಿದೆ. ರಾಜೇಶ್ ಭಟ್ ಆಂಧ್ರಪ್ರದೇಶ, ತಮಿಳುನಾಡು ಮುಂತಾದ ಕಡೆಗಳಲ್ಲಿ ತಲೆಮರೆಸಿಕೊಂಡಿರುವುದು ತಿಳಿದು ಬಂದಿದ್ದು, ತಮಿಳು, ತೆಲುಗು, ಕನ್ನಡ, ಹಿಂದಿ, ಇಂಗ್ಲಿಷ್, ಹಿಂದಿ ಭಾಷೆಗಳಲ್ಲಿ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.

ಈ ಮಧ್ಯೆ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಮಂಗಳೂರು ಪೊಲೀಸರು ಆರೋಪಿ ವಕೀಲ ರಾಜೇಶ್ ಭಟ್ ಗೆ ಸೇರಿದ 12 ಬ್ಯಾಂಕ್ ಅಕೌಂಟ್ ಗಳನ್ನು ಫ್ರೀಝ್ ಮಾಡಲಾಗಿದೆ.