ಭೀಕರ ಅಪಘಾತದಲ್ಲಿ ಹೊತ್ತಿ ಉರಿದ ಬಸ್ – 12 ಮಂದಿ ದಾರುಣ ಸಾವು…

66
firstsuddi

ಜೈಪುರ್ : ಬಸ್ ಮತ್ತು ಟ್ಯಾಂಕರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಇಡೀ ಬಸ್ ಹೊತ್ತಿ ಉರಿದಿದೆ. ಪರಿಣಾಮ, 12 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಾರ್ಮರ್-ಜೋಧ್ಪುರ ಹೆದ್ದಾರಿಯಲ್ಲಿ ನಡೆದಿದೆ.

ಈ ಬಸ್ ಬಲೋತ್ರಾದಿಂದ ಬೆಳಗ್ಗೆ 9.55ಕ್ಕೆ ಹೊರಟಿತ್ತು. ಈ ವೇಳೆ ಎದುರಿನಿಂದ ಬಂದ ಟ್ಯಾಂಕರ್ ಬಸ್‍ಗೆ ಡಿಕ್ಕಿ ಹೊಡೆದಿದೆ. ಟ್ಯಾಂಕರ್ ಡಿಕ್ಕಿಯಾಗುತ್ತಿದ್ದಂತೆ ಬಸ್ ಗೆ  ಬೆಂಕಿ ತಗುಲಿದೆ. ಈ ಖಾಸಗಿ ಬಸ್ ನಲ್ಲಿ ಸುಮಾರು 25 ಮಂದಿ ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ಗಾಯಾಳುಗಳನ್ನು ಖಾಸಗಿ ವಾಹನಗಳ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ಯಾಂಕರ್ ಚಾಲಕ ರಸ್ತೆಯ ತಪ್ಪಾದ ಬದಿಯಲ್ಲಿ ವಾಹನ ಚಲಾಯಿಸಿಕೊಂಡು ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದು, ಬಾರ್ಮರ್ ಜಿಲ್ಲಾಧಿಕಾರಿಯೊಟ್ಟಿಗೆ ಮಾತನಾಡಿದ್ದೇನೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಎಲ್ಲ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.