ಬೆಂಗಳೂರು : ಬಿಟ್ ಕಾಯಿನ್ ದಂಧೆಯ ಆರೋಪ ಹೊತ್ತಿರುವ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಇಂದು ಜೈಲಿನಿಂದ ಹೊರ ಬಂದಿದ್ದಾರೆ.
ಜೈಲಿನಿಂದ ಹೊರ ಬಂದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀಕಿ, ನಾನು ಏನೂ ಮಾಡಿಲ್ಲ, ಮಾಧ್ಯಮದವರೇ ಎಲ್ಲವನ್ನೂ ಸೃಷ್ಟಿ ಮಾಡುತ್ತಿದ್ದಾರೆ. ಬಿಟ್ ಕಾಯಿನ್ ಬಗ್ಗೆ ನಂಗೇನು ಗೊತ್ತಿಲ್ಲ. ನಾನ್ ಹೋಗಬೇಕು ನನ್ನ ಬಿಟ್ಟುಬಿಡಿ. ನನಗೆ ಜಾಮೀನು ಯಾರು ನೀಡಿದ್ದಾರೆ ನನಗೆ ಗೊತ್ತಿಲ್ಲ. ಪೋಲಿಸರು ಹಣ ಸೀಜ್ ಮಾಡಿರುವುದು ಸುಳ್ಳು. ನಾನು ಹೆಬ್ಬಾಳದ ಆಸ್ಪತ್ರೆಗೆ ತೆರಳುತ್ತಿದ್ದೇನೆ. ನಮ್ಮ ಅಪ್ಪ ಆಸ್ಪತ್ರೆಯಲ್ಲಿ ಇದ್ದಾರೆ ಎಂದು ಹೇಳಿಕೆ ನೀಡಿದ್ದಾನೆ.
ಖಾಸಗಿ ಹೋಟೆಲ್ ನಲ್ಲಿ ನಡೆದ ಗಲಾಟೆ, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದ ಶ್ರೀಕಿಗೆ ನಿನ್ನೆ ಸಂಜೆ ನ್ಯಾಯಾಲಯ ಜಾಮೀನು ನೀಡಿತ್ತು.










