ಬಿಟ್ ಕಾಯಿನ್ ಹಗರಣದಲ್ಲಿ ಕಾಂಗ್ರೆಸ್ ನಾಯಕರೂ ಇದ್ದಾರೆ : ಸಿಎಂ ಬೊಮ್ಮಾಯಿ.

81
firstsuddi

ನವದೆಹಲಿ : ಬಿಟ್ ಕಾಯಿನ್ ಹಗರಣದಲ್ಲಿ ಕಾಂಗ್ರೆಸ್ ನಾಯಕರೂ ಇದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ನವದೆಹಲಿಯ ಕರ್ನಾಟಕ ಭವನದಲ್ಲಿಂದು ಸುದ್ದಿಗಾರರೊಂದಿಗೆ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ. ಪ್ರಿಯಾಂಕ್ ಖರ್ಗೆಗೆ ಸರಿಯಾದ ಮಾಹಿತಿ ಪಡೆದುಕೊಳ್ಳೋದಕ್ಕೆ ಹೇಳಿ ಎಂದು ಟಾಂಗ್ ನೀಡಿದರು.

ಪ್ರಧಾನಿ ಮೋದಿ, ರಾಷ್ಡ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿಗೆ ಸಮಯಾವಕಾಶ ಕೇಳಿದ್ದೇನೆ. ಅವಕಾಶ ಸಿಕ್ಕಲ್ಲಿ ಮಾತುಕತೆ ನಡೆಸಲಿದ್ದೇನೆ ಎಂದು ಸಿಎಂ ಹೇಳಿದ್ದಾರೆ.