ಬೆಳಗಾವಿ ಬೈಪಾಸ್ ರಸ್ತೆ ಕಾಮಗಾರಿ ವಿರೋಧಿಸಿ ಪ್ರತಿಭಟನೆ – ಬೆಂಕಿ ಹಚ್ಚಿಕೊಂಡ ರೈತ!

72
firstsuddi

ಬೆಳಗಾವಿ : ಹಲಗಾ- ಮಚ್ಛೆ ಬೈಪಾಸ್ ರಸ್ತೆ ಕಾಮಗಾರಿ ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ರೈತನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ನಡೆದಿದೆ.

ರಸ್ತೆ ನಿರ್ಮಾಣಕ್ಕೆ ಈ ಮೊದಲು ಸರ್ವೇ ಮಾಡಿದ ಜಮೀನು ಅಲ್ಲದೇ ಫಲವತ್ತಾದ ಕೃಷಿ ಭೂಮಿಯನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಆರೋಪಿಸಿದ ರೈತರು ಫಲವತ್ತಾದ ಜಮೀನು ಬಿಟ್ಟುಕೊಡುವುದಿಲ್ಲ ಎಂದು ರೈತರು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು.

ಈ ವೇಳೆ, ರೈತನ ಪುತ್ರನೊಬ್ಬ ರಸ್ತೆ ಕಾಮಗಾರಿ ಆರಂಭಿಸಿದರೆ ಮರದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುವೆ ಎಂದು ಮರವೇರಿ ಬೆದರಿಕೆ ಹಾಕಿದ್ದಾನೆ. ಇನ್ನೊಬ್ಬ ರೈತ ಆಕಾಶ್ ಅನಗೋಳಕರ್ ಎಂಬುವವರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ತಕ್ಷಣವೇ ಪೊಲೀಸರು ರೈತನನ್ನು ರಕ್ಷಿಸಿದ್ದಾರೆ. ಇನ್ನೊಬ್ಬ ರೈತ ಕೈಯಲ್ಲಿ ಕುಡುಗೋಲು ಹಿಡಿದು ಪೊಲೀಸರ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ್ದು ಪೊಲೀಸರು ಮಹಿಳೆಯರನ್ನ ಎಳೆದಾಡಿ ಸೀರೆ ಹರಿದು ಹಾಕಿದ ಘಟನೆ ಸ್ಥಳದಲ್ಲಿ ನಡೆದಿದೆ.

ಇದರಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿಯಾಯಿತು. ಪೊಲೀಸರ ವಿರುದ್ಧ ರೈತರು, ಮಹಿಳೆಯರು ಆಕ್ರೋಶ ಹೊರಹಾಕಿದರು. ಪೊಲೀಸರು, ಎರಡು ಪ್ರತ್ಯೇಕ ವಾಹನದಲ್ಲಿ ರೈತರನ್ನು ವಶಕ್ಕೆ ಪಡೆದರು. ಪೊಲೀಸರ ದಬ್ಬಾಳಿಕೆ ವಿರುದ್ಧ ರೈತರು ಕಿಡಿಕಾರಿದರು.