ಹಳಿ ತಪ್ಪಿದ ರೈಲು – ತಪ್ಪಿದ ಭಾರಿ ಅನಾಹುತ…

77
firstsuddi

ಬೆಂಗಳೂರು : ಕಣ್ಣೂರು–ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನ ಐದು ಬೋಗಿಗಳು ಹಳಿ ತಪ್ಪಿದ್ದು, ಭಾರಿ ಅನಾಹುತವೊಂದು ತಪ್ಪಿದೆ.

ಮುಂಜಾನೆ 3.50ರ ಸುಮಾರಿಗೆ ರೈಲು ತೊಪ್ಪೂರು – ಶಿವಾಡಿ ಬಳಿ ಚಲಿಸುತ್ತಿದ್ದ ವೇಳೆ ಹಳಿಯ ಮೇಲೆ ಬಂಡೆಗಳು ಉರುಳಿಬಿದ್ದ ಪರಿಣಾಮ ರೈಲಿನ ಐದು ಬೋಗಿಗಳು ಹಳಿ ತಪ್ಪಿದೆ. ಅದೃಷ್ಟವಶಾತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 2,348 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ.

ಇನ್ನೂ ಅಪಘಾತದ ಬಗ್ಗೆ ಮಾಹಿತಿ ಪಡೆದ ರೈಲ್ವೇ ಉನ್ನತ ಅಧಿಕಾರಿಗಳು ಮತ್ತು ಸ್ಥಳೀಯ ಆಡಳಿತವು ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ.