ಯಾದಗಿರಿ : ಆಟೋ ಹಾಗೂ ಲಾರಿ ನಡುವೆ ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಗರದ ಮುದ್ನಾಳ್ ಕ್ರಾಸ್ ಬಳಿ ಸಂಭವಿಸಿದೆ.
ಕಂಚಗಾರಹಳ್ಳಿ ತಾಂಡ ನಿವಾಸಿಯಾದ ಆಟೋ ಚಾಲಕ ಲಕ್ಷ್ಮಣ, ಶಹಾಪುರ ತಾಲೂಕಿನ ಹೋತಪೇಟೆ ನಿವಾಸಿ ಜಯರಾಜ್ ಹಾಗೂ 15 ದಿನದ ಮಗು ದುರಂತದಲ್ಲಿ ಮರಣ ಹೊಂದಿದ್ದಾರೆ. ಯಾದಗಿರಿ ತಾಲೂಕಿನ ಕಂಚಗಾರಹಳ್ಳಿ ತಾಂಡಾಗೆ ಹೋಗುತ್ತಿದ್ದರು. ಈ ವೇಳೆ ಭೀಕರ ಅಪಘಾತ ಸಂಭವಿಸಿದೆ.
ಇನ್ನು ಆಟೋದಲ್ಲಿ ಪ್ರಯಾಣಿಸುತ್ತಿದ್ದ 6 ಜನರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯಾದಗಿರಿ ಸಂಚಾರಿ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.










