15 ವರ್ಷದ ಬಾಲಕಿ ಮೇಲೆ ಅತ್ಯಾಚಾರ – ಆರೋಪಿಗೆ ಜೈಲು ಶಿಕ್ಷೆ…

72
firstsuddi

ತುಮಕೂರು : 15 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ತುಮಕೂರಿನ ಪೋಕ್ಸೋ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ಮತ್ತು 40 ಸಾವಿರ ರೂ. ದಂಡ ವಿಧಿಸಿ ಅದೇಶ ನೀಡಿದೆ.

2019ರಲ್ಲಿ ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿ ಮಂಜುನಾಥ ಎಂಬಾತ ಬಾಲಕಿಯನ್ನ ಅಪಹರಿಸಿ ಅತ್ಯಾಚಾರ ಎಸಗಿದ್ದನು. ಈ ಬಗ್ಗೆ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ಈ ಸಂಬಂಧ ವಿಚಾರಣೆ ನಡೆಸಿದ ತುಮಕೂರು ಪೋಕ್ಸೋ ನ್ಯಾಯಾಲಯವು ಅಪರಾಧಿಗೆ ಕಠಿಣ ಶಿಕ್ಷೆ ವಿಧಿಸಿದೆ. ಸರ್ಕಾರಿ ವಕೀಲೆ ಬಿ.ವಿ. ಗಾಯತ್ರಿ ರಾಜು ವಾದ ಮಂಡಿಸಿದ್ದು, ನ್ಯಾಯಾಧೀಶ ಕೃಷ್ಣಯ್ಯ ಅವರು ಆದೇಶ ನೀಡಿದ್ದಾರೆ.