ಕ್ರಿಕೆಟ್ ಪಂದ್ಯದ ವೇಳೆ ಡಿಕ್ಕಿ – ಆಟಗಾರ ಐಸಿಯುವಿಗೆ ದಾಖಲು…

57
firstsuddi

ಹುಬ್ಬಳ್ಳಿ : ರಾಜನಗರದ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಡಿವಿಷನ್ ಕ್ರಿಕೆಟ್ ಟೂರ್ನಿಯ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಇಬ್ಬರು ಆಟಗಾರರು ಡಿಕ್ಕಿ ಹೊಡೆದುಕೊಂಡಿದ್ದು, ಪರಿಣಾಮ ಓರ್ವ ಆಟಗಾರ ಗಂಭೀರವಾಗಿ ಗಾಯಗೊಂಡಿದ್ದು, ಐಸಿಯುಗೆ ದಾಖಲಾಗಿದ್ದಾನೆ.

ಹುಬ್ಬಳ್ಳಿ ಕ್ರಿಕೆಟ್ ಅಕಾಡೆಮಿ ಎ ಹಾಗೂ ಧಾರವಾಡದ ಎಸ್ ಡಿಎಂ ಬಿ ತಂಡಗಳ ನಡುವೆ ಪಂದ್ಯ ನಡೆಯುತ್ತಿತ್ತು. ಈ ವೇಳೆ ಎಸ್ ಡಿಎಂ ಬಿ ತಂಡದ ಪ್ರಜ್ವಲ್ ಶಿರೋಳ ಮತ್ತು ಪ್ರಜ್ವಲ್ ಬೋರಣ್ಣ ಡಿಕ್ಕಿಯಾಗಿ, ಪ್ರಜ್ವಲ್ ಶಿರೋಳ ಪ್ರಜ್ಞಾಹೀನನಾಗಿ ಮೈದಾನದಲ್ಲಿ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಕ್ಲಬ್ ನ ಸದಸ್ಯರು, ಪಂದ್ಯ ನೋಡುತ್ತಿದ್ದವರು ಮತ್ತು ಕೆಎಸ್‌ಸಿಎ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕೆಲ ಸಮಯದಲ್ಲಿಯೇ ಸ್ಕ್ಯಾನಿಂಗ್ ಮಾಡಿದಾಗ ಮೆದುಳಿಗೆ ಬಲವಾಗಿ ಪೆಟ್ಟು ಬಿದ್ದಿದ್ದು ದೃಢಪಟ್ಟಿತ್ತು.ಹೀಗಾಗಿ, ತಕ್ಷಣವೇ ಶಸ್ತ್ರ ಚಿಕಿತ್ಸೆ ಮಾಡಬೇಕು ಎಂದು ವೈದ್ಯರು ಹೇಳಿದ್ದರು. ಅದರಂತೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದು, ಪ್ರಜ್ವಲ್ ಚೇತರಿಸಿಕೊಳ್ಳುತ್ತಿದ್ದಾನೆ.

ಇನ್ನೂ ಗಾಯಗೊಂಡಿರುವ ಪ್ರಜ್ವಲ್ ಶಿರೋಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಭರಿಸಲಿದೆ.