ಆಶಿಶ್ ಮಿಶ್ರಾ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್…

110
firstsuddi

ಲಕ್ನೋ : ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ಲಖಿಂಪುರ ಖೇರಿ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ. ಪ್ರಕರಣದಲ್ಲಿ ಆಶಿಶ್ ಮಿಶ್ರಾ, ಲವ್ ಕುಶ್ ರಾಣಾ ಮತ್ತು ಆಶಿಶ್ ಪಾಂಡೆ ಈ ಮೂವರನ್ನು ಬಂಧಿಸಲಾಗಿದೆ. ಇದೀಗ ಈ ಮೂವರ ಜಾಮೀನು ಅರ್ಜಿಯನ್ನೂ ಕೋರ್ಟ್ ತಿರಸ್ಕರಿಸಿದೆ.

ಈ ಹಿಂಸಾಚಾರ ಪ್ರಕರಣ ತುಂಬ ಗಂಭೀರ ಸ್ವರೂಪದ್ದಾಗಿದೆ ಮತ್ತು ಕೇಸ್ಗೆ ಸಂಬಂಧಪಟ್ಟ ತನಿಖೆ ನಡೆಯುತ್ತಲೇ ಇದೆ. ಈ ಹಂತದಲ್ಲಿ ಜಾಮೀನು ನೀಡದಂತೆ ಸರ್ಕಾರದ ಪರ ವಕೀಲ ಅರವಿಂದ್ ತ್ರಿಪಾಠಿ ವಾದ ಮಂಡಿಸಿದ್ದರು. ಪ್ರಕರಣದ ತೀವ್ರತೆ ಅರಿತ ಕೋರ್ಟ್ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಅಕ್ಟೋಬರ್ 3ರಂದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದರು. ವೇಳೆ ಆಶಿಶ್ ಮಿಶ್ರಾಗೆ ಸಂಬಂಧಿಸಿದ ಕಾರನ್ನು ರೈತರು ಮೇಲೆ ಹರಿಸಲಾಗಿತ್ತು. ಪರಿಣಾಮ ಸ್ಥಳದಲ್ಲಿ 8 ಮಂದಿ ರೈತರು ಸಾವನ್ನಪ್ಪಿದ್ದರು.