ಥಾಣೆ (ಮಹಾರಾಷ್ಟ್ರ) : 5 ವರ್ಷದ ಬಾಲಕಿ ಮೇಲೆ ನೆರೆ ಮನೆಯ 20 ವರ್ಷದ ಯುವಕ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಥಾಣೆಯ ರಾಮನಗರ ಪ್ರದೇಶದಲ್ಲಿ ನಡೆದಿದೆ.
ನವೆಂಬರ್ 14 ರಂದು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದ ಯುವಕ ಆಕೆ ಮೇಲೆ ಅತ್ಯಾಚಾರ ಮಾಡಿ ಪರಾರಿಯಾಗಿದ್ದಾನೆ. ಸಂತ್ರಸ್ತೆಗೆ ಆಕೆಯ ತಾಯಿ ಸ್ನಾನ ಮಾಡಿಸುವ ವೇಳೆ ವಿಚಾರ ಗೊತ್ತಾಗಿದ್ದು, ಕೂಡಲೇ ಬಾಲಕಿಯ ತಾಯಿ ಶಾಂತಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.










