ಮಂಗಳೂರು : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ವಕೀಲ ಕೆಎಸ್ಎನ್ ರಾಜೇಶ್ ಭಟ್ ನ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಬಿರುಸುಗೊಳಿಸಿದ್ದು, ನಿನ್ನೆ ಬಿಜೈಯಲ್ಲಿರುವ ರಾಜೇಶ್ ಭಟ್ ಮನೆಗೆ ದಾಳಿ ಮಾಡಿ ಶೋಧ ನಡೆಸಿದ್ದಾರೆ. ಪ್ರಕರಣದ ತನಿಖಾಧಿಕಾರಿ ಎಸಿಪಿ ರಂಜಿತ್ ಬಂಡಾರು ಅವರ ನೇತೃತ್ವದಲ್ಲಿ ಪೊಲೀಸರು ಮನೆಯಲ್ಲಿ ಶೋಧ ನಡೆಸಿದರು. ದಾಳಿಯ ವೇಳೆ ಪೊಲೀಸರು ದಾಖಲೆಗಳಿಗಾಗಿ ಹುಡುಕಾಟ ನಡೆಸಿದರು ಎನ್ನಲಾಗಿದೆ.
ತನ್ನ ವಿರುದ್ದ ಪ್ರಕರಣ ದಾಖಲಾಗುತ್ತಿದ್ದಂತೆ ರಾಜೇಶ್ ಭಟ್ ಪರಾರಿಯಾಗಿದ್ದು, ಆರೋಪಿ ರಾಜೇಶ್ ಭಟ್ ಗಾಗಿ ಶೋಧ ನಡೆಸುತ್ತಿರುವ ಪೊಲೀಸರು ಲುಕ್ ಔಟ್ ನೋಟಿಸ್ ಕೂಡ ಜಾರಿ ಮಾಡಿದ್ದಾರೆ.










