ಭಾರಿ ಮಳೆ ಹಿನ್ನಲೆ ಇಂದು ಶಬರಿಮಲೆ ಯಾತ್ರೆಗೆ ನಿಷೇಧ…

74
firstsuddi

ತಿರುವನಂತಪುರಂ : ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಸತತ ಮಳೆಯಾಗುತ್ತಿದ್ದು, ಪಂಪಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಯಾತ್ರಾರ್ಥಿಗಳ ಸುರಕ್ಷತೆಯ ಸಲುವಾಗಿ ಇಂದು ಪಂಪ ಮತ್ತು ಶಬರಿಮಲೆಯ ಪ್ರಸಿದ್ಧ ಅಯ್ಯಪ್ಪ ದೇವಸ್ಥಾನಕ್ಕೆ ಯಾತ್ರೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಾ ಎಸ್ ಅಯ್ಯರ್ ಅವರು ನಿನ್ನೆ ಆದೇಶ ಹೊರಡಿಸಿದ್ದಾರೆ.

ವರ್ಚುವಲ್ ಕ್ಯೂ ಸಿಸ್ಟಮ್ ಮೂಲಕ ಅಯ್ಯಪ್ಪನ ದರ್ಶನಕ್ಕೆ ಸ್ಲಾಟ್ ಕಾಯ್ದಿರಿಸಿದ ಯಾತ್ರಾರ್ಥಿಗಳಿಗೆ ಹವಾಮಾನ ಸರಿಯಾದ ಬಳಿಕ ದರ್ಶನಕ್ಕೆ ಅವಕಾಶ ನೀಡಲಾಗುವುದು. ಮಳೆಯಿಂದ ಇಂದು ಶಬರಿಮಲೆಗೆ ಯಾತ್ರಾರ್ಥಿಗಳು ಪ್ರಯಾಣ ಕೈಗೊಳ್ಳದೆ ಸಹಕರಿಸುವಂತೆ ಕೋರುತ್ತೇವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಎರಡು ತಿಂಗಳ ಕಾಲ ವಾರ್ಷಿಕ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಗಾಗಿ ನವೆಂಬರ್ 16ರಂದು ಶಬರಿಮಲೆ ದೇಗುಲದ ಬಾಗಿಲನ್ನು ತೆರೆಯಲಾಗಿದ್ದು, ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.