ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ, ಮಗುವಿನ ಜನನಕ್ಕೆ ಕಾರಣ – ಪೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ…

94
firstsuddi

ಮಂಗಳೂರು : . ಎಸ್ಎಸ್ಎಲ್​​ಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಮಗುವಿನ ಜನನಕ್ಕೆ ಕಾರಣನಾದ ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.

ಉಪ್ಪಿನಂಗಡಿಯ ಹಿರೆಬಂಡಾಡಿ ಗ್ರಾಮದ ಮದ್ಮಿತ್ತಿಮಾರು ನಿವಾಸಿ ಕೇಶವ (34) ಅತ್ಯಾಚಾರ ನಡೆಸಿದ ಆರೋಪಿ. ಬಾಲಕಿಯ ಹೊಟ್ಟೆಯಲ್ಲಿ ಗೆಡ್ಡೆ ಬೆಳೆದಿದೆ ಎಂದು ಆಕೆಯ ಪೋಷಕರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ವೈದ್ಯರು ತಪಾಸಣೆ ನಡೆಸಿದಾಗ ಆಕೆ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ.

ಇದೀಗ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಸ್ಪತ್ರೆಯ ವೈದ್ಯಾಧಿಕಾರಿಗಳು ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ತಿಳಿಸಿದ್ದಾರೆ. ಈ ಸಂಬಂಧ ವಿಚಾರಣೆ ನಡೆಸಿದಾಗ ಕೇಶವ ಅತ್ಯಾಚಾರ ಮಾಡಿರುವುದಾಗಿ ಬಾಲಕಿ ಹೇಳಿದ್ದಾಳೆ. ಈ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.