ಮನೆ ಸಂಪೂರ್ಣ ಹಾನಿಯಾಗಿದ್ದರೆ 1 ಲಕ್ಷ ರೂ. ಪರಿಹಾರ : ಸಿಎಂ ಬೊಮ್ಮಾಯಿ.

69
firstsuddi

ಬೆಂಗಳೂರು : ಭಾರೀ ಮಳೆಯಿಂದಾಗಿ ಮನೆ ಸಂಪೂರ್ಣ ಹಾನಿಯಾಗಿದ್ದರೆ ತಕ್ಷಣ 1 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 500 ಕೋಟಿ ರೂ.ಗಳನ್ನು ರಸ್ತೆ ದುರಸ್ತಿಪಡಿಸಲು ಬಿಡುಗಡೆ ಮಾಡಲಾಗಿದೆ. ಭಾಗಶಃ ಮನೆ ಹಾನಿಗೆ ಹಣ ಬಿಡುಗಡೆಗೆ ಆದೇಶಿಸಿದ್ದೇನೆ. ಬೆಳೆ ಸಮೀಕ್ಷೆ ಇಂದಿನಿಂದ ಶೀಘ್ರವಾಗಿ ಆರಂಭವಾಗಲಿದೆ. ಬೆಳೆ ಸಮೀಕ್ಷೆ ಪರಿಹಾರ ಆ್ಯಪ್ ನಲ್ಲಿ ಎಂಟ್ರಿಯಾಗಬೇಕು. ಅದರಂತೆ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ನೆರೆಹಾನಿ ಸಂಭವಿಸಿದೆ. ಸಂಬಂಧಪಟ್ಟ ಇಲಾಖೆಯ ಮಂತ್ರಿಗಳು ಪ್ರವಾಸ ಮಾಡಬಹುದು. ಆದರೆ, ಜಿಲ್ಲಾ ಉಸ್ತುವಾರಿ ಸಚಿವರು ಪ್ರವಾಸ ಮಾಡಬಾರದು ಎಂದು ಚುನಾವಣಾ ಆಯೋಗ ತಿಳಿಸಿದೆ. ಹಾಗಾಗಿ ಸಂಬಂಧಪಟ್ಟ ಇಲಾಖೆ ಸಚಿವರು ಮತ್ತು ನಾನು ಪ್ರವಾಸಕ್ಕೆ ಹೋಗುತ್ತೇವೆ. ಇಂದು ಕೋಲಾರಕ್ಕೆ ಭೇಟಿ ನೀಡಿ ನರೆ ಹಾನಿ ಪರಿಶೀಲನೆ ಮಾಡಲಿದ್ದೇನೆ ಎಂದು ಸಿಎಂ ಸ್ಪಷ್ಟಪಡಿಸಿದರು.