ಕಳ್ಳತನ ಪ್ರಕರಣ : 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…

76
firstsuddi

ಹುಬ್ಬಳ್ಳಿ : ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅರೋಪಿಯನ್ನು ಬಂಧಿಸುವಲ್ಲಿ ಶಹರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಬ್ದುಲ್ ಬಂಧಿತ ಆರೋಪಿ. ಹಳೆ ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆದರೆ ನಿನ್ನೆ ಶಹರ ಠಾಣೆ ಇನ್ಸ್ಪೆಕ್ಟರ್ ಆನಂದ ಒಣಕುದರಿ ನೇತೃತ್ವದ ತಂಡ ಅರೋಪಿಯನ್ನು ಗೋವಾದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ.