ಬೆಂಗಳೂರು : ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ನವೆಂಬರ್ 26ರಿಂದ ಮತ್ತೆ ವರುಣನ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ಸಿಕ್ಕಿದೆ.
ರಾಜ್ಯದಲ್ಲಿ ಸದ್ಯ ವರುಣ ಕೊಂಚ ಬಿಡುವು ಕೊಟ್ಟಿದ್ದಾನೆ. ಮಳೆ ಸದ್ಯ ನಿಂತಿದ್ದು ಮಳೆಯ ಪರಿಣಾಮಕ್ಕೆ ಮಾತ್ರ ಇನ್ನೂ ಮುಕ್ತಿ ಸಿಕ್ಕಿಲ್ಲ. ಈ ನಡುವೆ ಈಗ ಮತ್ತೆ ನವೆಂಬರ್ 26 ರಿಂದ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು ಆತಂಕ ಹೆಚ್ಚಾಗಿದೆ.
ನವೆಂಬರ್ 26ರಿಂದ ಡಿಸೆಂಬರ್ 15ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೈಕ್ಲೋನ್ ಆಗಿ ಬದಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡು, ಕೇರಳ, ಆಂಧ್ರ ಕರಾವಳಿಯಲ್ಲಿ ಹೆಚ್ಚು ಮಳೆಯಾಗಲಿದ್ದು ,ನೆರೆ ರಾಜ್ಯಗಳಲ್ಲಿ ಮಳೆ ಹಿನ್ನೆಲೆ ನವೆಂಬರ್ 26ರಿಂದ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.










