ಮೈಸೂರು : ಚಾಮುಂಡಿ ಬೆಟ್ಟವನ್ನು ಉಳಿಸಿ ಎಂದು ಸಾಹಿತಿ ಎಸ್.ಎಲ್. ಭೈರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲೇನಿದೆ?
ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಿಂದ ಚಾಮುಂಡಿಬೆಟ್ಟಕ್ಕೆ ತೊಂದರೆಯಾಗುತ್ತದೆ. ಚಾಮುಂಡಿಬೆಟ್ಟವನ್ನ ಕಾಂಕ್ರೀಟ್ ಕಾಡು ಮಾಡುವ ಯೋಜನೆ ಇದಾಗಿದ್ದು, ಈ ಯೋಜನೆಯನ್ನ ಅನುಷ್ಠಾನಗೊಳಿಸಬಾರದು. ಜೊತೆಗೆ ಚಾಮುಂಡಿಬೆಟ್ಟಕ್ಕೆ ಹೋಗುವಂತ ವಾಹನಗಳಿಗೆ ನಿರ್ಬಂಧ ಹಾಕಬೇಕು. ಗಣ್ಯವ್ಯಕ್ತಿಗಳ ವಾಹನ ಸೇರಿದಂತೆ ಎಲ್ಲಾ ವಾಹನಗಳಿಗೂ ನಿರ್ಬಂಧ ವಿಧಿಸಬೇಕು.
ಸರ್ಕಾರದಿಂದಲೇ ಪರಿಸರ ಸ್ನೇಹಿ ವಿದ್ಯುತ್ ಚಾಲಿತ ಬಸ್ ಗಳನ್ನು ಬಿಡಬೇಕು. ಜೊತೆಗೆ ಚಾಮುಂಡಿ ಬೆಟ್ಟದಲ್ಲಿ ವಾಸ ಇರುವ 4 ಸಾವಿರ ಜನರಿಗೆ ನಗರದಲ್ಲಿ ಸ್ಥಳವಕಾಶ ಮಾಡಿಕೊಡಬೇಕು. ಚಾಮುಂಡಿ ಬೆಟ್ಟದಲ್ಲಿ ವಾಸ ಇರುವ 4 ಸಾವಿರ ಜನರಿಗೆ ನಗರದಲ್ಲಿ ಸ್ಥಳವಕಾಶ ಮಾಡಿಕೊಡಬೇಕು. ದೇವಸ್ಥಾನದ ಅರ್ಚಕರು ಹಾಗೂ ದೇವಾಲಯದ ಸಿಬ್ಬಂದಿಗೆ ಮಾತ್ರ ಉಳಿಯಲು ಅವಕಾಶ ಕೊಡಬೇಕು. ಇನ್ನುಳಿದ ಜನರನ್ನು ನಗರಕ್ಕೆ ಸ್ಥಳಾಂತರಿಸಿ ಅವರಿಗೆ ಪರಿಹಾರವನ್ನು ನೀಡಬೇಕು ಎಂದು ಪತ್ರದಲ್ಲಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.










