ಚಿಕ್ಕಮಗಳೂರು : ಹರಿಹರಪುರ ಮಠಾಧೀಶ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಯವರು ನಾಳೆ ನಗರಕ್ಕೆ ಆಗಮಿಸಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ನಗರ ಪ್ರವೇಶ ಮಾಡಲಿರುವ ಅವರು 11 ಗಂಟೆಗೆ ಕಾಮಧೇನು ಕ್ಷೇತ್ರದಲ್ಲಿ ನಡೆಯಲಿರುವ ಧರ್ಮಸಭೆ ಮತ್ತು ಶ್ರೀ ಕಾಮಧೇನು ಸೇವಾರತ್ನ ಪ್ರಶಸ್ತಿ ಪ್ರದಾನ ಸಮಾರಂಭದ ಸಾನ್ನಿಧ್ಯ ವಹಿಸಲಿದ್ದು, ಮಧ್ಯಾಹ್ನ 12.30ಕ್ಕೆ ಜರುಗಲಿರುವ ಬ್ರಹ್ಮರಥೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕ್ಷೇತ್ರದ ಧರ್ಮಾಧಿಕಾರಿ ಡಾ|| ಎಂ.ಎಸ್.ನಂಜುಂಡಸ್ವಾಮಿ ತಿಳಿಸಿದ್ದಾರೆ.










