ದಾವಣಗೆರೆ : ಜೆಡಿಎಸ್ ಜೊತೆ ಹೊಂದಾಣಿಕೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.
ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ಆಯೋಜಿಸಿದ್ದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ ವೇಳೆ ಮಾತನಾಡಿದ ಅವರು, ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಹೋಗಲು ನಿರ್ಧಾರ ಮಾಡ್ತೇವೆ. ಜೆಡಿಎಸ್ನವರು ಎಲ್ಲೆಲ್ಲಿ ಅರ್ಭರ್ಥಿಗಳನ್ನು ಹಾಕುತ್ತಾರೋ ನೋಡಿಕೊಂಡು ನಂತರ ನಿರ್ಧಾರ ಮಾಡ್ತೇವೆ. ಪರಸ್ಪರ ಸಹಕಾರ ಕೊಡಿ ಎಂದು ಅವರಲ್ಲಿ ಕೇಳುತ್ತೇವೆ ಎಂದು ಬಿಎಸ್ವೈ ತಿಳಿಸಿದರು.
ವಿಧಾನ ಪರಿಷತ್ ಚುನಾವಣೆಯಿಂದ ಎರಡನೇ ಸುತ್ತಿನ ಪ್ರಚಾರ ಶುರುವಾಗಿದೆ. ರಾಜ್ಯದಲ್ಲಿ ಕೇವಲ 20 ಸೀಟ್ಗಳಿಗೆ ನಿಶ್ಚಿತವಾಗಿ ಸ್ಪರ್ಧೆ ಮಾಡುತ್ತೇವೆ. ಇದರಲ್ಲಿ 15 ಸೀಟ್ ಗೆದ್ದೇ ಗೆಲ್ಲುತ್ತೇವೆ. ವಿಧಾನ ಪರಿಷತ್ನಲ್ಲಿ ಸ್ಪಷ್ಟ ಬಹುಮತ ಸಿಗಲಿ ಎಂದು ಅಪೇಕ್ಷೆ. ಬಿಜೆಪಿ ಪರ ವಾತಾವರಣ ಎಲ್ಲಾ ಕಡೆ ಇದೆ. ಅದ್ದರಿಂದ ಎಲ್ಲಾ ಕಡೆ ಪ್ರವಾಸ ಶುರು ಮಾಡಿದ್ದೇವೆ. ಶಾಸಕರು ಕೂಡ ನಮ್ಮವರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.










