‘ಅಂಬಿ ಕಾಯಕ’ ಪ್ರಶಸ್ತಿ ಸ್ವೀಕರಿಸಬೇಕಿದ್ದ ಇಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ…

64
firstsuddi

ಮಂಡ್ಯ : ‘ಅಂಬಿ ಕಾಯಕ’ ಪ್ರಶಸ್ತಿಯನ್ನು ಸ್ವೀಕರಿಸಬೇಕಿದ್ದ ಕೆ.ಆರ್.ಪೇಟೆಯ ಇಂಜಿನಿಯರ್ ಕೆ.ಶ್ರೀನಿವಾಸ್ ಅವರ ನಿವಾಸದ ಮೇಲೆ ಎಸಿಬಿ ದಾಳಿ ನಡೆಸಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ.

ಜಿಲ್ಲೆಯ ರೈತ ಸಭಾಂಗಣದಲ್ಲಿ ನಿನ್ನೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘ ಆಯೋಜಿಸಿತ್ತು. ಈ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 10 ಮಂದಿ ಸಾಧಕರನ್ನು ಸಂಘ ಆರಿಸಿತ್ತು. ಈ ಹತ್ತು ಜನರಲ್ಲಿ ಕೆ.ಆರ್.ಪೇಟೆಯಲ್ಲಿ ಇಂಜಿನಿಯರ್ ಆಗಿದ್ದ ಕೆ.ಶ್ರೀನಿವಾಸ್ ಕೂಡ ಒಬ್ಬರಾಗಿದ್ದರು. ಆದರೆ ಪ್ರಶಸ್ತಿ ಸ್ವೀಕಾರ ಮಾಡುವ ದಿನವೇ ಮನೆಯ ಮೇಲೆ ಎಸಿಬಿ ದಾಳಿ ನಡೆಸಿದ ಕಾರಣ ಕಾಯಕ್ರಮಕ್ಕೆ ಶ್ರೀನಿವಾಸ್ ಗೈರಾಗಿದ್ದರು.

ಈ ಪ್ರಶಸ್ತಿಯನ್ನು ಸಂಸದೆ ಸುಮಲತಾ ಅಂಬರೀಶ್ ಪ್ರದಾನ ಮಾಡಿದರು.

8ರಿಂದ 10 ಎಸಿಬಿ ಅಧಿಕಾರಿಗಳು ಕೆ.ಶ್ರೀನಿವಾಸಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಜೊತೆಗೆ ನಂಜನಗೂಡಿನಲ್ಲಿರುವ ತೋಟದ ಮನೆ ಮೇಲೂ ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.