ಧಾರವಾಡ : ಜಿಲ್ಲೆಯ ಎಸ್ಡಿಎಂ ಮೆಡಿಕಲ್ ಕಾಲೇಜಿನ 182 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ನಿನ್ನೆ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ನಿನ್ನೆ 690 ಜನರಿಗೆ ಆರ್ಟಿಪಿಸಿಆರ್ ಟೆಸ್ಟ್ ಮಾಡಲಾಗಿತ್ತು. ಈ ಪೈಕಿ ಮತ್ತೆ 116 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ನ.17 ರಂದು ಕಾಲೇಜಿನ ಡಿ.ವಿರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಲವು ಪಾಲಕರು ಕೂಡ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ. ಅಂತಹ ವ್ಯಕ್ತಿಗಳು ಕೂಡ ಕೋವಿಡ್ ಪರೀಕ್ಷೆಗೆ ಒಳಪಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್.ಕೆ. ಪಾಟೀಲ ತಿಳಿಸಿದ್ದಾರೆ.
ಮತ್ತೊಂದೆಡೆ ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿರುವ ದೊಡ್ಡಸಂದ್ರದ ಖಾಸಗಿ ಶಾಲೆಯಲ್ಲಿ 37 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 13 ರಿಂದ 15 ವರ್ಷದ 33 ವಿದ್ಯಾರ್ಥಿಗಳು, ನಾಲ್ವರು ಶಾಲಾ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.










