ಹಿರಿಯ ವಿದ್ವಾಂಸ ಪ್ರೊ.ಕೆ.ಎಸ್. ನಾರಾಯಣಾಚಾರ್ಯ ಇನ್ನಿಲ್ಲ…

81
firstsuddi

ಬೆಂಗಳೂರು : ಹಿರಿಯ ವಿದ್ವಾಂಸ ಪ್ರೊ.ಕೆ.ಎಸ್. ನಾರಾಯಣಾಚಾರ್ಯ(88) ನಿಧನರಾಗಿದ್ದಾರೆ.

ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ತಮ್ಮ ಬೆಂಗಳೂರಿನ ನಿವಾಸದಲ್ಲಿ ಪ್ರೊ.ಕೆ.ಎಸ್. ನಾರಾಯಣಾಚಾರ್ಯ ಅವರು ಕೊನೆಯುಸಿರೆಳೆದಿದ್ದಾರೆ.

ಪ್ರೊ. ಕೆ.ಎಸ್. ನಾರಾಯಣಾಚಾರ್ಯ ಅವರು 1933ರಲ್ಲಿ ಕನಕಪುರದ ವೈದಿಕ ಶ್ರೀ ವೈಷ್ಣವ ಕುಟುಂಬದಲ್ಲಿ ಜನಿಸಿದರು. ಬೇಂದ್ರೆಯವರಿಂದ ಪ್ರೇರಣೆಗೊಳಗಾಗಿ ಇವರು ಪ್ರವಚನಗಳಿಂದ ಲೇಖನದೆಡೆಗೂ ಮುಖ ಮಾಡಿದರು. ರಾಮಾಯಣಸಹಶ್ರೀ, ಆಚಾರ್ಯ ಚಾಣಕ್ಯ ಸೇರಿದಂತೆ ಹಲವು ಅಮೂಲ್ಯ ಕೃತಿಗಳನ್ನು ರಚಿಸಿದ್ದರು. ಕನ್ನಡ, ಇಂಗ್ಲಿಷ್, ತಮಿಳಿನಲ್ಲೂ ರಾಮಾಯಾಣದ ಬಗ್ಗೆ ಉಪನ್ಯಾಸಗಳನ್ನು ನೀಡಿದ್ದರು. ವಿದ್ವನ್ಮಣಿ’, ‘ವೇದಭೂಷಣ’, ‘ವಾಲ್ಮೀಕಿ ಹೃದಯಜ್ಞ’, ‘ರಾಮಾಯಣಾಚಾರ್ಯ’, ‘ಮಹಾಭಾರತಾಚಾರ್ಯ’ ಮೊದಲಾದ ಬಿರುದುಗಳು ವಿವಿಧ ಮಠಾಧೀಶರಿಂದ ಕೆ. ಎಸ್. ನಾರಾಯಣಾಚಾರ್ಯ ಅವರಿಗೆ ದೊರೆತಿದೆ.

ಹಿರಿಯ ವಿದ್ವಾಂಸ ಪ್ರೊ.ಕೆ.ಎಸ್. ನಾರಾಯಣಾಚಾರ್ಯ ನಿಧನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ವಿದ್ವಾಂಸರಾದ ನಾರಾಯಣಾಚಾರ್ಯರ ನಿಧನ ನೋವಿನ ಸಂಗತಿ. ಪ್ರವಚನ, ಕಾದಂಬರಿಕಾರರಾಗಿ ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ನಾರಾಯಣಾಚಾರ್ಯರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಸುವೆ. ಪ್ರೊ. ಕೆ.ಎಸ್. ನಾರಾಯಣಾಚಾರ್ಯರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕುಟುಂಬಕ್ಕೆ ಸಿಗಲೆಂದು ಪ್ರಾರ್ಥಿಸುವೆ ಎಂದಿದ್ದಾರೆ.