ಬೆಂಗಳೂರು : ಈ ಬಾರಿ ಶಿಕ್ಷಣ ಇಲಾಖೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ವೊಂದನ್ನು ನೀಡಿದ್ದು, ಶೇ.20ರಷ್ಟು ಎಸ್ಎಸ್ಎಲ್ಸಿ ಪಠ್ಯ ಕಡಿತ ಮಾಡಲು ಚಿಂತನೆ ನಡೆಸಿದೆ.
ಕೊರೊನಾ ಹಿನ್ನೆಲೆ ತರಗತಿಗಳು ತಡವಾಗಿ ಪ್ರಾರಂಭ ಆಗಿದ್ದವು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಪಠ್ಯವನ್ನು ಪೂರ್ಣಗೊಳಿಸಲು ಅನೇಕ ತೊಂದರೆಗಳು ಉಂಟಾಗುತ್ತಿದ್ದವು. ಹೀಗಾಗಿ ಪಠ್ಯ ಕಡಿತಕ್ಕೆ ಒತ್ತಡ ಕೇಳಿ ಬಂದಿತ್ತು. ಇದನ್ನೆಲ್ಲವನ್ನು ಗಮನಿಸಿದ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 20% ಪಠ್ಯ ಕಡಿತಗೊಳಿಸುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮನಸ್ಸಿನಲ್ಲಿ ಇಟ್ಟುಕೊಂಡು ಶೇ.20ರಷ್ಟು ಕಡಿತಕ್ಕೆ ಚಿಂತನೆ ಮಾಡಿದ್ದೇವೆ. ಈ ಬಗ್ಗೆ ಶಿಕ್ಷಕರು ಕೂಡಾ ಪಠ್ಯ ಕಡಿತ ಮಾಡಲು ಮನವಿ ಮಾಡಿದ್ದಾರೆ. ಹೀಗಾಗಿ ಪಠ್ಯ ಕಡಿತ ಮಾಡುವ ಬಗ್ಗೆ ಇನ್ನೆರಡು ದಿನಗಳಲ್ಲಿ ತೀರ್ಮಾನ ಮಾಡುತ್ತೇವೆ ಎಂದರು.
ಇನ್ನೂ ಪರೀಕ್ಷೆಯ ಕುರಿತು ಮಾತನಾಡಿ, ಮಾರ್ಚ್- ಏಪ್ರಿಲ್ ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.










