ಮಂಗಳೂರು : ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರ ಬಂಧನ…

100
firstsuddi

ಮಂಗಳೂರು : ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆಯೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿ, ಓರ್ವ ಸಂತ್ರಸ್ತ ಯುವತಿಯನ್ನು ರಕ್ಷಣೆ ಮಾಡಿರುವ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಂಧಿತ ಆರೋಪಿಗಳನ್ನು ಉಡುಪಿ ಜಿಲ್ಲೆ ಉಳಿಯಾರ ಗೋಳಿ ನಿವಾಸಿ ಅಬ್ದುಲ್ ಹಫೀಸ್ (55) ಮತ್ತು ಕಾಟಿಪಳ್ಳ ಕೃಷ್ಣಾಪುರ ನಿವಾಸಿ ರಮ್ಲಾತ್ (46) ಎಂದು ಗುರುತಿಸಲಾಗಿದೆ.

ನವೆಂಬರ್ 25 ರಂದು(ನಿನ್ನೆ) ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಾವೂರು ಕಟ್ಟೆ ಪರಿಸರದ ಬಾಡಿಗೆ ಮನೆಯೊಂದರಲ್ಲಿ ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಬೆಂಗಳೂರು , ಮಂಗಳೂರು, ಮೈಸೂರು, ಉಡುಪಿ ಹಾಗೂ ಇತರ ಕಡೆಗಳಲ್ಲಿನ ಯುವತಿಯರನ್ನು, ಮಹಿಳೆಯರನ್ನು ಕಳ್ಳಸಾಗಾಟದ ಮೂಲಕ ಮಂಗಳೂರಿಗೆ ಕರೆಯಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಹಾಗೂ ಸಿಬ್ಬಂದಿಯವರು ದಾಳಿ ನಡೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಬ್ದುಲ್ ಹಫೀಸ್ ಮತ್ತು ರಮ್ಲಾತ್ ಅವರನ್ನು ಬಂಧಿಸಿ ಓರ್ವ ಸಂತ್ರಸ್ತ ಯುವತಿಯನ್ನು ರಕ್ಷಿಸಲಾಗಿದೆ.

ಆರೋಪಿಗಳಿಂದ ರೂ. 10,060 ರೂ ನಗದು, 3 ಮೊಬೈಲ್ ಫೋನುಗಳು ಮತ್ತು ಸ್ಕಾರ್ಪಿಯೋ ಕಾರು ಸೇರಿ ಒಟ್ಟು ರೂ. 3,25,560 ರೂ ಮೊತ್ತದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ. ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.