ಧಾರವಾಡ ಮೆಡಿಕಲ್ ಕಾಲೇಜಿನಲ್ಲಿ ಮತ್ತೆ 77 ಮಂದಿಗೆ ಕೊರೊನಾ…

60
firstsuddi

ಧಾರವಾಡ : ಧಾರವಾಡದ ಎಸ್‌ಡಿಎಂ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು, ಇಂದು ಮತ್ತೆ 77 ಮಂದಿಗೆ ಸೋಂಕು ದೃಢಪಟ್ಟಿದೆ.

ಕಳೆದ ಎರಡು ದಿನಗಳಲ್ಲಿ 204 ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇಂದು 77 ಪ್ರಕರಣಗಳು ಸೇರಿ ಒಟ್ಟು 281 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಎಲ್ಲರಿಗೂ ಚಿಕಿತ್ಸೆ, ಔಷಧೋಪಚಾರ ನಡೆಯುತ್ತಿದೆ. ಇನ್ನೂ 1,822 ಮಂದಿಯ ಕೋವಿಡ್ ಪರೀಕ್ಷೆಯ ವರದಿಗಳು ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದ್ದಾರೆ.

ಎಸ್‌ಡಿಎಂ, ಕಿಮ್ಸ್, ಡೆಮಾನ್ಸ್, ಆಸ್ಪತ್ರೆಯ ಪ್ರಯೋಗಾಲಯದಲ್ಲಿ ಈ ಮಾದರಿಗಳನ್ನು ಪರೀಕ್ಷಿಸಲಾಗುತ್ತಿದೆ.