ದಾವಣಗೆರೆ : ಬೊಲೆರೋ ಹಾಗೂ ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾಮನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗರಗ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಚನ್ನಗಿರಿ ತಾಲೂಕಿನ ವಡ್ನಾಳ್ ಬನ್ನಿಹಟ್ಟಿ ಗ್ರಾಮದ ಕುಮಾರ್ ಹಾಗೂ ಓಂಕಾರಪ್ಪ ಎಂದು ಗುರುತಿಸಲಾಗಿದೆ. ಬೈಕ್ ಹಾಗೂ ಬೊಲೆರೋ ವಾಹನ ಎರಡೂ ಅತಿ ವೇಗವಾಗಿ ಬಂದ ಕಾರಣ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಚನ್ನಗಿರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










