ಚಿತ್ರದುರ್ಗ : ತಾಯಿಯೊಬ್ಬಳು ಮಗುವಿಗೆ ವಿಷವುಣಿಸಿ ತಾನು ಸಹ ಆತ್ಮಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ತುಮಕೂರು ನಗರದ ಲೋಕೇಶ್ ತನ್ನ ಪತ್ನಿಯಾದ ವನಿತಗೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಪತಿಯ ಕಿರುಕುಳದಿಂದ ಮನನೊಂದ ವನಿತ ತನ್ನ ಮಗ ಚಾರ್ವಿತ್(4)ಗೆ ವಿಷವುಣಿಸಿದ ಬಳಿಕ ತಾನು ಕೂಡ ವಿಷ ಸೇವಿಸಿ ಭಯದಿಂದ ತನ್ನ ತವರೂರಾದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋಡಿಹಳ್ಳಿ ಗ್ರಾಮಕ್ಕೆ ತೆರಳಿದ್ದಾರೆ. ಆಗ ಅವರ ಕುಟುಂಬಸ್ಥರು ತಕ್ಷಣ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದು, ಈ ವೇಳೆ ಚಾರ್ವಿತ್ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಸದ್ಯ ವನಿತಾ ಅವರ ಸ್ಥಿತಿ ಗಂಭೀರವಾಗಿದ್ದು, ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣ ಚಿತ್ರದುರ್ಗ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.










