ಮೂಡಿಗೆರೆ : ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ : ಕೊಲೆ ಶಂಕೆ…

139
firstsuddi

ಕೊಟ್ಟಿಗೆಹಾರ : ಕೆಲದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಳೂರಿನ ನಾಗೇಶ್ ಅಚಾರ್(46) ಅವರ ಮೃತದೇಹ ಬಿದಿರುತಳದಲ್ಲಿ ನಿನ್ನೆ ಸಂಜೆ ಪತ್ತೆಯಾಗಿದೆ.

ಬಿದಿರುತಳಕ್ಕೆ ಕೆಲಸಕ್ಕೆಂದು ಹೋಗಿದ್ದ ನಾಗೇಶ್ ಆಚಾರ್ ಅವರು ಕೆಲದಿನಗಳಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ನಾಗೇಶ್ ಆಚಾರ್ ಅವರ ಪತ್ನಿ ಸುಮ ಬಾಳೂರು ಠಾಣೆಗೆ ಕಾಣೆಯಾಗಿರುವ ಬಗ್ಗೆ ದೂರು ನೀಡಿದ್ದರು.

ಬಿದಿರುತಳದಲ್ಲಿ ಕಳೆದ ಎರಡು ದಿನಗಳಿಂದ ಪೋಲಿಸರು, ಅರಣ್ಯ ಅಧಿಕಾರಿಗಳು ಹಾಗೂ 100 ಕ್ಕೂ ಹೆಚ್ಚು ಗ್ರಾಮಸ್ಥರು ಹುಡುಕಾಟ ನಡೆಸಿದ್ದು ನಿನ್ನೆ ಸಂಜೆ ಬಿದಿರುತಳದ ಅರಣ್ಯದಲ್ಲಿ ಮೃತ ದೇಹ ಪತ್ತೆಯಾಗಿದೆ.

ಬಿದಿರುತಳ ಗ್ರಾಮದಿಂದ ಸುಮಾರು ಒಂದು ಕಿ.ಮಿ ದೂರದಲ್ಲಿ ಅರಣ್ಯ ಪ್ರದೇಶದಲ್ಲಿ ಮೃತದೇಹವನ್ನು ಹೂತು ಹಾಕಿದ್ದು ವಾಸನೆ ಹಾಗೂ ಹೆಜ್ಜೆ ಗುರುತಿನ ಆಧಾರದಲ್ಲಿ ಮೃತದೇಹವನ್ನು ಪತ್ತೆ ಹಚ್ಚಲಾಯಿತು.

ಮೃತದೇಹವನ್ನು ಹಾಸನದ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು, ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪ್ರಕರಣ ಸಂಬಂಧ ಪೋಲಿಸರು ಮೂವರನ್ನು ಬಂಧಿಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.