ಬೆಂಗಳೂರು : ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಪಾಲಕೃಷ್ಣ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
ನಗರದ ರಾಜಾನುಕುಂಟೆ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ನ್ಯಾಯಾಲಯದ ಅನುಮತಿ ಪಡೆದು ಐಪಿಸಿ ಸೆಕ್ಷನ್ 120ಬಿ ಮತ್ತು 506ರಡಿ ಎಫ್ಐಆರ್ ದಾಖಲಿಸಲಾಗಿದೆ. ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಮತ್ತಿತರರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
ಇತ್ತ ಪ್ರಕರಣ ಸಂಬಂಧ ರಾಜಾನುಕುಂಟೆ ಪೊಲೀಸರು ದೂರಿನ ಜೊತೆ ಯಾವುದೇ ದಾಖಲೆಗಳನ್ನ ನೀಡದ ಹಿನ್ನೆಲೆಯಲ್ಲಿ ಘಟನೆಗೆ ಸಂಬಂಧಪಟ್ಟ ದಾಖಲೆ ನೀಡುವಂತೆ ಶಾಸಕ ಎಸ್.ಆರ್.ವಿಶ್ವನಾಥ್ ಗೆ ನೋಟಿಸ್ ನೀಡಿದ್ದಾರೆ. ಅಲ್ಲದೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ, ಕುಳ್ಳ ದೇವರಾಜ್, ಕಾಂತ, ಧರ್ಮ, ಮಂಜ ಹಾಗೂ ಸಹಚರರಿಗೆ ಸೇರಿದಂತೆ ಒಟ್ಟು 10ಕ್ಕೂ ಹೆಚ್ಚು ಮಂದಿಗೆ ರಾಜಾನುಕುಂಟೆ ಪೊಲೀಸರು ನೋಟಿಸ್ ನೀಡಿದ್ದಾರೆ.










