ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ…

99
firstsuddi

ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟ ಶಿವರಾಮ್ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಶಿವರಾಮ್ ಅವರ ಆರೋಗ್ಯದ ಬಗ್ಗೆ ಶಿವರಾಮ್ ಹಿರಿಯ ಪುತ್ರ ರವಿಶಂಕರ್ ಮಾಹಿತಿ ನೀಡಿದ್ದು, ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಕಾರ್ ಆಕ್ಸಿಡೆಂಟ್ ಆಗಿತ್ತು. ನಂತರ ಮೂರು ದಿನಗಳಿಂದ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಮೊನ್ನೆ ರಾತ್ರಿ ಮನೆಯಲ್ಲಿ ಪೂಜೆ ಮಾಡುವ ಸಂದರ್ಭದಲ್ಲಿ ಅವರು ತಲೆ ಸುತ್ತಿ ಬಿದ್ದಿದ್ದು, ತಲೆಗೆ ಗಾಯವಾಗಿದೆ. ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದು ಸ್ಕ್ಯಾನಿಂಗ್ ಮಾಡಿಸಿದ್ದೇವೆ. ಸ್ಕ್ಯಾನಿಂಗ್ ರಿಪೋರ್ಟ್ ನಲ್ಲಿ ಮೆದುಳಿನಲ್ಲಿ ರಕ್ತಸ್ರಾವ ಆಗಿರೋದು ಗೊತ್ತಾಗಿದೆ. ವೈದ್ಯರು ಸರ್ಜರಿ ಮಾಡಬೇಕು ಎಂದು ಹೇಳಿದರು. ಆದರೆ ನಮ್ಮ ತಂದೆಗೆ ವಯಸ್ಸಾದ ಹಿನ್ನೆಲೆಯಲ್ಲಿ ಸರ್ಜರಿ ಮಾಡಲು ಆಗಲ್ಲ. ಸದ್ಯ ಐಸಿಯುನಲ್ಲೇ ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಿದ್ದಾರೆ.